
Mangalore: ಜೂ.29 ರಂದು ಶಕ್ತಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
Friday, June 28, 2024
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಜೂ.29 ರಂದು ಬೆಳಗ್ಗೆ 9.30 ಗಂಟೆಗೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಉತ್ತರವಲಯ ಶಾಸಕ ಡಾ. ಭರತ್ ಶೆಟ್ಟಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿಯಾದ ಡಾ. ಕೆ.ಸಿ ನಾಕ್ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಹೆಚ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.