Mangalore: ಭರವಸೆಯ ಬೆಳಕಾದ ಪದ್ಮರಾಜ್ ಆರ್. ಪೂಜಾರಿ

Mangalore: ಭರವಸೆಯ ಬೆಳಕಾದ ಪದ್ಮರಾಜ್ ಆರ್. ಪೂಜಾರಿ


ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತರೂ ಧೃತಿಗೆಡದೆ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿದ್ದಾರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ. ಅವರು ಬಡವರ ಕಣ್ಣೀರೊರೆಸುವ ಕಾರ್ಯ ಮಾಡಬೇಕು ಎನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋಚಾಲಕ ದಿ. ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತನ್ನು ನೀಡಿದ್ದಾರೆ.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು, ನೌಷಾದ್, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ದಾಮೋದರ ಮುರ, ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article