
Mangalore: ಪೆಟ್ರೋಲ್ ಡೀಸಿಲ್ ದರ ಏರಿಕೆ: ಸಿಪಿಐ ಖಂಡನೆ
Sunday, June 16, 2024
ಮಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ನಿರುದ್ಯೋಗ ಭಾರತದ ಇಂದಿನ ಅತ್ಯಂತ ದೊಡ್ಡ ಸಮಸ್ಯೆಗಳಾಗಿವೆ. ಬೆಲೆಗಳು ಗಗನಕ್ಕೇರುತ್ತಿದ್ದು, ಬಡವರ ಹಾಗೂ ಕೆಳ ಮಧ್ಯಮ ವರ್ಗದ ಜನರು ಕಂಗಾಲಾಗಿದ್ದಾರೆ.
ಇಂತಹ ವಿಷಮ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಸರಕಾರ ಪೆಟ್ರೋಲ್ ಹಾಗೂ ಡೀಸಿಲ್ ಮೇಲೆ ತೆರಿಗೆ ಹೆಚ್ಚಿಸಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಲಿದೆ. ಈಗಲೆ ಕಂಗಾಲಾಗಿರುವ ಜನಸಾಮಾನ್ಯರು ಬದುಕುವುದೇ ದುಸ್ತರವಾಗುತ್ತದೆ.
ರಾಜ್ಯ ಸರಕಾರದ ಈ ನಿರ್ಧಾರವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಹಾಗೂ ಹೆಚ್ಚಿಸಿದ ತೆರಿಗೆಯನ್ನು ಕೂಡಲೇ ಹಿಂಪಡೆಯಬೇಕೆಂದು ಪ್ರಕಟಣೆಯಲ್ಲಿ ಒತ್ತಾಯಿಸುತ್ತದೆ.