
Mangalore: ವೀರಪ್ಪ ಮೊಯ್ಲಿ ಅವರ ಪುತ್ರಿ ನಿಧನಕ್ಕೆ ಮಂಜುನಾಥ ಭಂಡಾರಿ ಸಂತಾಪ
Sunday, June 30, 2024
ಮಂಗಳೂರು: ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿ ಅವರು ರವಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವ ವಿಷಯ ತಿಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ, ಮೃತರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.