
Mangalore: ಯೋಗಾಭ್ಯಾಸದಲ್ಲಿ ಶಾಸಕ ಕಾಮತ್ ಭಾಗಿ
Saturday, June 22, 2024
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ ಅತ್ಯಂತ ಪರಿಣಾಮಕಾರಿಯಾಗಿದೆ. ಇಂತಹ ಯೋಗಾಭ್ಯಾಸವು ನಮ್ಮೆಲ್ಲರ ಜೀವನದಲ್ಲಿ ಶಾಂತಿ, ನೆಮ್ಮದಿ, ಆರೋಗ್ಯವನ್ನು ತರಲಿ ಎಂದು ಹಾರೈಸಿದರು.
ಮಂಡಲದ ಬಿಜೆಪಿ ಅಧ್ಯಕ್ಷ ರಮೇಶ್ ಕಂಡೆಟ್ಟು ಸಹಿತ ಅನೇಕ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.