Mangalore: ಹಕ್ಕು ಚಲಾಯಿಸಿದ ಶಾಸಕ ಕಾಮತ್
Monday, June 3, 2024
ಮಂಗಳೂರು: ರಾಜ್ಯದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮತ ಚಲಾಯಿಸಿದರು.
ಬಳಿಕ ಮಾದ್ಯಮದ ಜೊತೆ ಮಾತನಾಡಿ, ಜವಾಬ್ದಾರಿಯುತ ನಾಗರಿಕನಾಗಿ ನಾನು ನನ್ನ ಮತವನ್ನು ಚಲಾಯಿಸಿದ್ದೇನೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಕೂಡಾ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಕರ್ತವ್ಯವನ್ನು ಪಾಲಿಸಬೇಕು. ಆಗಲೇ ಚುನಾವಣೆಗಳಿಗೆ ಇನ್ನೂ ಹೆಚ್ಚಿನ ಮಹತ್ವ ಬರುವುದು ಎಂದು ಹೇಳಿದರು.