Mangalore: ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ವಿಶಿಷ್ಟ ಪ್ರತಿಭಟನೆ: ಕ್ಯಾ.ಬ್ರಿಜೇಶ್ ಚೌಟ

Mangalore: ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ವಿಶಿಷ್ಟ ಪ್ರತಿಭಟನೆ: ಕ್ಯಾ.ಬ್ರಿಜೇಶ್ ಚೌಟ


ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಜನಸಾಮ್ಯಾರ ಬದುಕಿಗೆ ಗ್ಯಾರಂಟಿ ಇಲ್ಲದಂತಾಗಿದೆ. ಉಚಿತ ಗ್ಯಾರಂಟಿಯ ಭರವಸೆ ನೀಡಿ ಜನಸಾಮಾನ್ಯರ ಬದುಕಿಗೆ ಈ ಸರಕಾರ ಬಲವಾದ ಏಟು ನೀಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಡಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ಖಂಡಿಸಿ ರಾಜ್ಯ ಸರಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಸಿದ್ದರಾಮಯ್ಯ ಸರಕಾರ ಪೊಳ್ಳು ಭರವಸೆಯ ಸರಕಾರ. ಜನತೆಯನ್ನು ಮರಳು ಮಾಡಿ ಅಧಿಕಾರಕ್ಕೆ ಬಂದ ಬಳಿಕ ಇದೀಗ ಹಂತ ಹಂತವಾಗಿ ಹೊರೆ ಏರಲಾರಂಭಿಸಿದೆ. ಪೆಟ್ರೋಲ್ ದರವನ್ನು ಲೀಟರ್‌ಗೆ 3 ರೂ. ಹಾಗು ಡೀಸೆಲ್ ದರ ರೂ.3.50 ಏರಿಕೆ ಮಾಡುವ ಮೂಲಕ ಬೆಲೆ ಏರಿಕೆಯ ಬರೆ ಎಳೆದಿದೆ. ಬಡವರ ಪರ ಎಂದು ಹೇಳಿ ಬಡವರನ್ನು ಲೂಟಿ ಮಾಡುವ ಸರಕಾರ ಇದಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ ಇದೀಗ ಜನರ ಮೇಲೆ ದ್ವೇಷ ಸಾಧಿಸಲು ಹೊರಟಿದೆ. ಸಿದ್ದರಾಮಯ್ಯ ಸರಕಾರಕ್ಕೆ ಇದು ಶೋಭೆಯಲ್ಲ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ಕೇವಲ ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ದರ ಏರಿಕೆಯ ಮೂಲಕ ಬಕ್ರೀದ್ ಹಬ್ಬದ ಉಡುಗೊರೆ ನೀಡಿದೆ. ರಾಜ್ಯವನ್ನು ದಿವಾಳಿ ಮಾಡಿದ  ಸಿದ್ದರಾಮಯ್ಯ ನೇತೃತ್ವದ ಸರಕಾರ ಶೂನ್ಯ ಸಾಧನೆ ಮಾಡಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, 15 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರ ಸಾಧನೆ ಏನೆಂಬುದು ಈಗ ಜನತೆಗೆ ಗೊತ್ತಾಗಿದೆ. ಸುಳ್ಳಿನ ಸರಮಾಲೆಯೊಂದಿಗೆ  ಅಧಿಕಾರಕ್ಕೆ ಬಂದ ಬಳಿಕ ಜನತೆಯನ್ನು ಸಂಕಷ್ಟಕ್ಕೆ ದೂಡಲಾಗಿದೆ. ಜನತೆಗೆ ನ್ಯಾಯ ಸಿಗುತ್ತಿಲ್ಲ ಎಂದು ಕಿಡಿಕಾರಿದರು.

ವಿನೂತನ ರೀತಿಯ ಪ್ರತಿಭಟನೆ..

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯ ಬಳಿಕ ನಗರದ ಪಿವಿಎಸ್ ವೃತ್ತದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದವರೆಗೆ ಕಾರನ್ನು ಹಗ್ಗದಿಂಂದ ಎಳೆದು ತಂದು ಸಾರ್ವಜನಿಕರಲ್ಲಿ ಭಿಕ್ಷೆ ಬೇಡಿ ಸ್ಥಳೀಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿ ಕಾರಿಗೆ ತುಂಬಿಸಲಾಯಿತು. ಅಲ್ಲದೆ ಸ್ಕೂಟರ್, ಬೈಕ್‌ಗಳನ್ನು ಕೂಡ ಕಾರ್ಯಕರ್ತರು ಪೆಟ್ರೋಲ್ ಬಂಕ್ ವರೆಗೆ ತಳ್ಳಿಕೊಂಡು ಬರುವ ಮೂಲಕ ಗಮನಸೆಳೆದರು. ಪ್ರತಿಭಟನೆಯುದ್ದಕ್ಕೂ ‘ಚೆಂಬು ಚೆಂಬು ಪಂಡೆರ್...ಒಟ್ಟೆ ತಿಪ್ಪಿ ಕೊರಿಯೆರ್’..ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳು ಕೇಳಿಬಂದವು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್‌ಗಳಾದ ಪ್ರೇಮಾನಂದ ಶೆಟ್ಟಿ, ಜಯಾನಂದ ಅಂಚನ್, ಉಪಮೇಯರ್ ಸುನೀತಾ,  ಬಿಜೆಪಿ ಪ್ರಮುಖರಾದ ಕ್ಯಾ.ಗಣೇಶ್ ಕಾರ್ಣಿಕ್, ಡಾ.ಮಂಜುಳಾ ರಾವ್, ಪೂಜಾ ಪೈ, ಸುಮನಾ ಶರಣ್, ಕಿಶೋರ್ ಕುಮಾರ್ ಪುತ್ತೂರು, ಸಂತೋಷ್ ಕುಮಾರ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಜಗದೀಶ ಶೇಣವ, ನಿತಿನ್ ಕುಮಾರ್, ವಿಕಾಸ್ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article