Mangalore: ಶರಣ್ ಪಂಪ್‌ವೆಲ್ ಪ್ರಕರಣಕ್ಕೆ ತಡೆಯಾಜ್ಞೆ
Wednesday, June 5, 2024
ಮಂಗಳೂರು: ನಗರದ ರಸ್ತೆಯಲ್ಲಿ ನಮಾಝ್ ಮಾಡಿರುವ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಸಹಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡಸಂಹಿತೆಯ ಕಲಂ 153(ಎ), 506 ರಂತೆ ಪ್ರಕರಣ ದಾಖಲಾಗಿತ್ತು. ಶರಣ್ ಪರ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.