Mangalore: ದೆಹಲಿಗೆ ತೆರಳುವ ಮುನ್ನ ಬಿಎಸ್‌ವೈ ಮಾರ್ಗದರ್ಶನ ಪಡೆದ ಕ್ಯಾ. ಬ್ರಿಜೇಶ್ ಚೌಟ

Mangalore: ದೆಹಲಿಗೆ ತೆರಳುವ ಮುನ್ನ ಬಿಎಸ್‌ವೈ ಮಾರ್ಗದರ್ಶನ ಪಡೆದ ಕ್ಯಾ. ಬ್ರಿಜೇಶ್ ಚೌಟ


ಮಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಬಿಜೆಪಿಯ ಸಂಸದರಿಗೆ ಹೈಕಮಾಂಡ್ ಬುಲಾವ್ ಕೊಟ್ಟಿದ್ದು ಈ ಸಭೆಯಲ್ಲಿ ಭಾಗವಹಿಸಲು ದೆಹಲಿ ಕಡೆ ಪ್ರಯಾಣ ಬೆಳೆಸಿರುವ ಮಧ್ಯದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ರಾಜ್ಯದಲ್ಲಿ ಚುನಾವಣೆಯ ಯಶಸ್ವಿ ನಿರ್ವಹಣೆಗೆ ಅಭಿನಂದಿಸಿದರು.

ಆ ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಅವರ ಮಾರ್ಗದರ್ಶನ ಪಡೆದರು. ಇದಾದ ನಂತರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ದೆಹಲಿ ಕಡೆ ಪ್ರಯಾಣಿಸಿದರು.

ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ಭಾಗವಹಿಸಿ ಮಂಗಳೂರಿಗೆ ವಾಪಸ್ ಆಗುವ ಮಾಹಿತಿ ಇದೆ.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article