.jpeg)
Mangalore: ಪ್ರಚೋದನಕಾರಿ ಹೇಳಿಕೆ ನೀಡಿದ ಬಿಜೆಪಿ ನಾಯಕ ಸಿ.ಟಿ. ರವಿ
ವಿಧಾನ ಸಭಾಧ್ಯಕ್ಷರ ಸಾಮ್ರಾಜ್ಯದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ: ಸಿ.ಟಿ. ರವಿ
ಮಂಗಳೂರು: ’ಪಾಕಿಸ್ತಾನದ ಕುನ್ನಿಗಳೆ... ಎಂದು ಘೋಷಣೆ ಕೂಗಿದರೆ ಪಾಕ್ ಕುನ್ನಿಗಳು ಪ್ರಚೋದನೆಗೆ ಒಳಗಾಗಬೇಕು. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ ಅಂದ ಹಾಗಾಯಿತು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.
ಉಳ್ಳಾಲದ ಬೋಳಿಯಾರ್‌ನಲ್ಲಿ ಜೂ.೯ರಂದು ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿದ ಘಟನೆಗೆ ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಪ್ರತಿಕ್ರಿಯಿಸಿದ ಅವರು, ’ಮಂಗಳೂರು ಪೊಲೀಸ್ ಕಮಿಷನರ್ ಅವರು ಪಾಕಿಸ್ತಾನದ ಕುನ್ನಿಗಳನ್ನು ಗುರುತಿಸಿ, ಅವರ ಮೇಲೆ ಪ್ರಕರಣ ಹಾಕಿ ಅವರನ್ನ ಗಡೀಪಾರು ಮಾಡಬೇಕು. ಅಥವಾ ಖಾದರ್ ಅವರೇ ಗುರುತಿಸಿ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು’ ಎಂದರು.
ಇರಿತಕ್ಕೆ ಒಳಗಾದ ಹರೀಶ್, ನಂದ ಕುಮಾರ್ ಕುಟುಂಬಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ರಾಜಧರ್ಮದ ಬಗ್ಗೆ ಮಾತನಾಡುವ ವಿಧಾನಸಭಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ತೆರಳಿದ್ದಾಗ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿಲ್ಲ. ಗಾಯಾಳುಗಳು ಪಾಕಿಸ್ತಾನದ ಕುನ್ನಿಗಳಾಗಿದ್ದರೆ ಅವರು ಆಸ್ಪತ್ರೆಯಲ್ಲೇ ಇರುತ್ತಿದ್ದರು. ಆದರೆ ಗಾಯಾಳುಗಳು ಭಾರತ ಮಾತೆಯ ಸುಪುತ್ರರಾದ ಕಾರಣ ಅವರು ಆಸ್ಪತ್ರೆಗೆ ಬಂದರೂ ಅವರಬ್ಬು ಭೇಟಿಯಾಗಿಲ್ಲ ಎಂದಿದ್ದಾರೆ.
ಇದಕ್ಕೂ ಮೊದಲು ಅವರು, ಆಸ್ಪತ್ರೆಯಲ್ಲಿರುವ ಚೂರಿ ಇರಿತದ ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.