.jpeg)
Mangalore: ರಾಹುಲ್ ಗಾಂಧಿಗೆ ಬಿ. ಜನಾರ್ದನ ಪೂಜಾರಿ ಅಭಿನಂದನೆ
Wednesday, June 26, 2024
ಮಂಗಳೂರು: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅಭಿನಂದಿಸಿದ್ದಾರೆ.
ದೇಶದ ಜನಸಾಮಾನ್ಯರ ಆಶಯದ ಪ್ರಕಾರ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟು, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಸಮರ್ಥವಾಗಿ ಅವರು ಕಾರ್ಯ ನಿರ್ವಹಿಸಲಿದ್ದು ಜನತೆಯ ಪರವಾದ ಧ್ವನಿ ಸಂಸತ್ತಿನಲ್ಲಿ ಗಟ್ಟಿಯಾಗಲಿದೆ ಎಂದಿದ್ದಾರೆ.