Mangalore: ಚುನಾವಣೆಯಲ್ಲಿ ಕಾಂಗ್ರೆಸ್ ನೈತಿಕವಾಗಿ ಗೆದ್ದಿದೆ, ಬಿಜೆಪಿ ಸೋತಿದೆ: ಬಿ. ರಮಾನಾಥ ರೈ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರೂ, ನಾವು ನೈತಿಕವಾಗಿ ಗೆದ್ದಿದ್ದೇವೆ. ಆದರೆ ಬಿಜೆಪಿಯವರು ನೈತಿಕವಾಗಿ ಸೋತಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಅವರು ಜೂ.6 ರಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಾರ್ ಸೊ ಪಾರ್ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ಅಧಿಕಾರ ಉಳಿಸಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ನಮ್ಮ ಒಕ್ಕೂಟವನ್ನು ಸೋಲಿಸುವ ಕೆಲಸ ಮಾಡಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಇಡಿ, ಐಟಿ, ಚುನಾವಣಾ ಆಯೋಗ ಬಳಸಿ ನಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳಿ ನಮ್ಮ ಕೈ ಕಟ್ಟಿಹಾಕುವ ಪ್ರಯತ್ನ ನಡೆಸಿದ್ದರು. ಆದರೆ ಜನತೆ ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳು ಮತಗಳಾಗಿ ನಮಗೆ ಪರಿವರ್ತನೆ ಆಗಿಲ್ಲ ಎನ್ನುವುದಕ್ಕಿಂತಲೂ ಬಡವರ ಬಾಳು ಬೆಳಗಲು ಸಹಕಾರಿಯಾಗಿದೆ ಎಂಬ ಆತ್ಮತೃಪ್ತಿ ಇದೆ. ಒಂದಲ್ಲ ಒಂದು ದಿನ ಜನ ಇದನ್ನು ನೆಪಿಸುತ್ತಾರೆ. ಹಾಗಾಗಿ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ರೈ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಈಗಾಗಲೇ ಜನರು ಬದಲವಣೆಯನ್ನು ಬಯಸುತ್ತಿರುವುದು ಈ ಬಾರಿಯ ಚುನಾವಣೆಯಲ್ಲಿ ಕಾಣುತ್ತಿದೆ. ಮುಂದಿನ ದಿನದಲ್ಲಿ ಬದಲಾವಣೆಯ ಪರ್ವ ಕಾಣುತ್ತಿದೆ. ಇಲ್ಲಿಗೇ ನಿಲ್ಲದೆ ಪಕ್ಷ ಸಂಘಟನೆಯ ಕೆಲಸ ನಡೆಯಲಿದೆ ಎಂದು ಹೇಳಿದರು.