Mangalore: ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನೀಡಿದ ಶಾಸಕ ಕಾಮತ್

Mangalore: ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನೀಡಿದ ಶಾಸಕ ಕಾಮತ್


ಮಂಗಳೂರು: ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ಹಾಗೂ ಇರಿತಕ್ಕೊಳಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಕಾಂಗ್ರೆಸ್ ಆಡಳಿತದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಹಾಕುವುದು ಕೂಡಾ ಅಪರಾಧವೇ? ಹಲ್ಲೆ ನಡೆಸಿದ ದುಷ್ಕರ್ಮಿಗಳ ಜೊತೆಗೆ ಬಿಜೆಪಿ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿರುವುದು ಖಂಡನೀಯ. ಸರ್ಕಾರವು ಕೊನೆಪಕ್ಷ ಇಂತಹ ಪ್ರಕರಣಗಳಲ್ಲಾದರೂ ಓಲೈಕೆ ರಾಜಕಾರಣವನ್ನು ಬಿಟ್ಟು ನಿಷ್ಪಕ್ಷವಾದ ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿದರು.

ರಮೇಶ್ ಕಂಡೆಟ್ಟು, ವಿಜಯಕುಮಾರ್ ಶೆಟ್ಟಿ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ರಾಜೇಂದ್ರ ಶೆಟ್ಟಿ, ಕಿರಣ್ ರೈ ಮತ್ತಿತರರು ಉಪಸ್ಥಿತರಿದ್ದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article