Mangalore: ಮಾದಕ ವಸ್ತುಗಳ ದುರುಪಯೋಗದ ವಿರುದ್ಧ ಜಾಗೃತಿ ಕಾರ್ಯಕ್ರಮ

Mangalore: ಮಾದಕ ವಸ್ತುಗಳ ದುರುಪಯೋಗದ ವಿರುದ್ಧ ಜಾಗೃತಿ ಕಾರ್ಯಕ್ರಮ


ಮಂಗಳೂರು: ಅಂತಾರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದಲ್ಲಿ ಆಯೋಜಿಸಲಾಗಿತ್ತು. 

ನಗರದ ಪಾಂಡೇಶ್ವರ ಠಾಣೆಯ ಎಸ್‌ಐ ಗುರುರಾಜ್, ಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾಗಾಣಿಕೆಯಂತಹ ಗಂಭೀರ ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಮತ್ತು ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಣೆ ತಡೆಯುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳ ಅಗತ್ಯವಿದೆ. ಮಾದಕ ವಸ್ತು ಸೇವನೆ ಹಾಗೂ ಅಕ್ರಮ ತಡೆ ಕ್ರಮಗಳನ್ನು ಉತ್ತೇಜಿಸಲು ಇಂತಹ ದಿನಗಳು ವೇದಿಕೆಯನ್ನು ಒದಗಿಸಿಕೊಡುತ್ತವೆ ಎಂದರು. ಅಲ್ಲದೇ, ಮಾದಕ ವಸ್ತುಗಳಿಂದ ಮಾನವನ ಮೇಲಾಗುವ ತೊಡಕುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. 

ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಎ. ಸಿದ್ಧಿಕ್ ಸ್ವಾಗತಿಸಿ, ಉಪನ್ಯಾಸಕಿ ಸಿ. ಲಹರಿ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article