Mangalore: ಓಎನ್‌ಜಿಸಿಯ ಹೈಡ್ರೋಜನ್ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಸಂಸದ ಚೌಟ ಒತ್ತಾಯ

Mangalore: ಓಎನ್‌ಜಿಸಿಯ ಹೈಡ್ರೋಜನ್ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಸಂಸದ ಚೌಟ ಒತ್ತಾಯ


ಮಂಗಳೂರು: ನವದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಮನವಿ ಮಾಡಿದರು.

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜಿಎಂಪಿಎಲ್ ಕಂಪೆನಿ ಸ್ವಾಧೀನ ಪಡಿಸಿಕೊಂಡ ಜೆಬಿಎಫ್ ಕಂಪೆನಿಯ ಉದ್ಯೋಗಿಗಳನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು.

ಓಎನ್‌ಜಿಸಿಯ ಹೈಡ್ರೋಜನ್ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಹಾಗೂ ಅದರಿಂದ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವಂತೆ ಸಚಿವರಲ್ಲಿ ಒತ್ತಾಯಿಸಲಾಯಿತು ಎಂದು ಕ್ಯಾ. ಬ್ರಿಜೇಶ್ ಚೌಟ ಹೇಳಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article