
Mangalore: ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರಿಂದ ಆಶೀರ್ವಾದ ಪಡೆದ ಸಂಸದ ಚೌಟ
Sunday, June 30, 2024
ಮಂಗಳೂರು: ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಇಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.