
Mangalore: ಮಂಗಳೂರು ವಿ.ವಿ.ಯಿಂದ ಮೂವರು ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ಪ್ರದಾನ
Saturday, June 15, 2024
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವದಲ್ಲಿ ಉದ್ಯಮಿಗಳಾದ ಡಾ. ರೊನಾಲ್ಡ್ ಕೊಲಾಸೋ, ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹಾಗೂ ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯ್ದಿನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಘಟಿಕೋತ್ಸವದಲ್ಲಿ ಡಾ. ತುಂಬೆ ಮೊಯ್ದೀನ್ ಗೈರು ಹಾಜರಾಗಿದ್ದರು.
ಉನ್ನತ ಶಿಕ್ಷಣ ಸಚಿವ, ಮಂಗಳೂರು ವಿವಿ ಸಹ ಕುಲಾಧಿಪತಿ ಡಾ. ಎಂ.ಸಿ. ಸುಧಾಕರ್, ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವವಿದ್ಯಾನಿಲಯದ ಸಾಧನೆಯ ವಿವರ ನೀಡಿದರು. ವಿವಿ ರಿಜಿಸ್ಟ್ರಾರ್ ಕೆ. ರಾಜು ಮೊಗವೀರ, ಪರೀಕ್ಷಾಂಗ ಕುಲಸಚಿವ ಪ್ರೊ. ಎಚ್. ದೇವೇಂದ್ರಪ್ಪ ಇದ್ದರು.