
Mangalore: ಜಲಸಿರಿ ಕಾಮಗಾರಿಯ ಪ್ರಗತಿ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಡಾ. ಭರತ್ ಶೆಟ್ಟಿ
Thursday, June 27, 2024
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವಿಭಾಗಿಯ ಕಚೇರಿ ಸುರತ್ಕಲ್ ಇಲ್ಲಿ ಜಲಸಿರಿ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ನಡೆಸಲಾಯಿತು.
ಯಾವುದೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸಿ, ನಿಗದಿತ ಸಮಯದ ಒಳಗೆ ಕಾಮಗಾರಿ ಮುಗಿಸುವಂತೆ ಶಾಸಕರು ಸೂಚಿಸಿದರು. ಕಾಂಕ್ರೀಟ್ ರಸ್ತೆಯನ್ನು ತುಂಡರಿಸಿದ ಬಳಿಕ ಯಥಾ ಸ್ಥಿತಿಯಲ್ಲಿ ಪ್ಯಾಚ್ ವರ್ಕ್ ಮಾಡಲು ಬೇಕಾದ ಕ್ರಮವನ್ನು ಕೈಗೊಳ್ಳುವಂತೆ ಆದೇಶ ನೀಡಿದರು.
ಸ್ಥಳೀಯ ಮಹಾನಗರ ಪಾಲಿಕೆಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಮರ್ಪಕ ಮಾಹಿತಿಯನ್ನು ನೀಡಿ ಅಧಿಕಾರಿಗಳು ಕಾಮಗಾರಿಯನ್ನು ನಡೆಸಬೇಕು ಎಂದು ಇದೇ ಸಂದರ್ಭ ತಾಕೀತು ಮಾಡಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯ ಸುನಿತಾ, ಮಹಾನಗರ ಪಾಲಿಕೆಯ ಸದಸ್ಯರು, ಪಾಲಿಕೆಯ ಇಂಜಿನಿಯರ್‌ಗಳು, ಜಲ ಸಿರಿ ಅಧಿಕಾರಿಗಳು ಉಪಸ್ಥಿತರಿದ್ದರು.