
Mangalore: ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ
Sunday, June 30, 2024
ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಬಜರಂಗದಳ ಸೇವಾ ಸಪ್ತಾಹದ ಪ್ರಯುಕ್ತ ರಕ್ತನಿಧಿ ಕೇಂದ್ರ ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಇಂದು ಮಂಗಳೂರು ಸುರತ್ಕಲ್‌ನ ಬಾಲ ಶ್ರೀರಾಮಚಂದ್ರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ಗ್ರಾಮ ಪಂಚಾಯಿತಿನ ಅಧ್ಯಕ್ಷ ಶಂಕರ್ ಜೋಗಿ ವಹಿಸಿಕೊಂಡಿದ್ದರು. ಬಜರಂಗದಳ ಜಿಲ್ಲಾ ಸಹಸಂಯೋಜಕ ಪ್ರೀತಮ್ ಕಾಟಿಪಳ್ಳ, ಪ್ರಖಂಡ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಪ್ರಖಂಡ ಸಂಯೋಜಕ ಆಶಿತ್ ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.