Mangalore: ಶ್ರೀ ವೆಂಕಟರಮಣ ದೇವರ ದರ್ಶನ ಪಡೆದ ಕ್ಯಾ. ಬ್ರಿಜೇಶ್ ಚೌಟ

Mangalore: ಶ್ರೀ ವೆಂಕಟರಮಣ ದೇವರ ದರ್ಶನ ಪಡೆದ ಕ್ಯಾ. ಬ್ರಿಜೇಶ್ ಚೌಟ


ಮಂಗಳೂರು: ನಗರದ ರಥಬೀದಿಯಲ್ಲಿರುವ ಪ್ರತಿಷ್ಠಿತ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪ್ರಚಂಡ ಮತಗಳಿಂದ ಚುನಾಯಿತರಾದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳವಾರ ಶ್ರೀ ದೇವಳಕ್ಕೆ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಕ್ಯಾ. ಬೃಜೇಶ್ ಚೌಟರವರನ್ನು ಸಮಸ್ತ ಜಿ.ಎಸ್.ಬಿ ಸಮಾಜವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕ್ಯಾ. ಬೃಜೇಶ್ ಚೌಟರವರ ತಂದೆ ಶೇಷಣ್ಣ ಚೌಟ ಹಾಗೂ ತಾಯಿ ಪುಷ್ಪಾ ಚೌಟ  ಮತ್ತು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಉಳ್ಳಾಲ್ ನಂದನ್ ಮಲ್ಯ, ದೇವಳದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಸತೀಶ್ ಪ್ರಭು, ಸಾಹುಕಾರ್ ಕಿರಣ್ ಪೈ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article