Mangalore: ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ: ಉಮಾನಾಥ ಕೋಟ್ಯಾನ್

Mangalore: ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ: ಉಮಾನಾಥ ಕೋಟ್ಯಾನ್


ಮಂಗಳೂರು: ಪಿಲಿಕುಳ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅವರು ಜೂ.22 ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಿಲಿಕುಳದಲ್ಲಿ ಪ್ರತಿ ವರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರೈತರಿಗೂ ತಾವು ಬೆಳೆದ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಗಲಿದೆ ಎಂದು ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ್ ಕುಮಾರ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪ್ರವೀಣ್ ನಾಯಕ್, ಆಡಳಿತಾಧಿಕಾರಿ ಡಾ. ಅಶೋಕ್, ಪಿಲಿಕುಳ ವಿಜ್ಞಾನ ಕೇಂದ್ರದ ನಿರ್ದೇಶಕ ಪ್ರೊ. ಕೆ.ವಿ. ರಾವ್ ಉಪಸ್ಥಿತರಿದ್ದರು.

ಹಣ್ಣುಗಳ ಮೇಳಕ್ಕೆ ಮೊದಲ ದಿನ ಉತ್ತಮ ಸ್ಪಂದನೆ ದೊರೆತಿದೆ. ಹಣ್ಣು ಹಂಪಲುಗಳು, ತರಕಾರಿ ಬೀಜಗಳು, ಹಣ್ಣು ಹಂಪಲು ಗಿಡಗಳು, ವಿವಿಧ ಖಾದ್ಯಗಳ ಮಳಿಗೆಗಳು ಮೇಳದಲ್ಲಿ ಗಮನ ಸೆಳೆದಿದೆ. ಭಾನುವಾರ ಸಂಜೆ ಮೇಳ ಸಮಪನಗೊಳ್ಳಲಿದೆ.










Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article