Mangalore: ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

Mangalore: ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ


ಮಂಗಳೂರು: ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಾಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಾದ ಬಳಿಕ ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರುವಂತೆ ಸಮುದ್ರತೀರದ ಮನೆಮಂದಿ ಬಳಿ ಸಂಸದರು ಮನವಿ ಮಾಡಿದ್ದಾರೆ ಹಾಗೂ ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕರಿಗಳಿಗೆ ಸೂಚಿಸುವ ಜೊತೆಗೆ ಸಾಧ್ಯವಾಗುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಉಳ್ಳಾಲ ತಾಲೂಕು ತಹಶಿಲ್ದಾರ ಪ್ರದೀಪ್ ಕುರುಡೇಕರ್, ಪೋರ್ಟ್ ಎಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕ ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಮ್‌ಇಐ ಮಾಜಿ ಅಧ್ಯಕ್ಷ ಸಂತೋಷ್ ಬೋಳಿಯಾರ್, ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.








Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article