Mangalore: ಮತದಾರರ ತೀರ್ಪನ್ನು ಸ್ವೀಕರಿಸುತ್ತೇವೆ: ಕೆ. ಹರೀಶ್ ಕುಮಾರ್
Wednesday, June 5, 2024
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಸ್ವೀಕರಿಸುತ್ತೇವೆ. ಕಾಂಗ್ರೆಸ್ ಸೋಲಿನ ಬಗ್ಗೆ ಪರಾಮರ್ಶಿಸುತ್ತೇವೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ನಮ್ಮ ಅಭ್ಯರ್ಥಿಯ ಪರವಾಗಿ ಮತದಾನ ಮಾಡಿರುವ ಮತದಾರ ಬಂಧುಗಳಿಗೆ ಹಾಗೂ ಪಕ್ಷಕ್ಕಾಗಿ ಹಗಲಿರುಲು ದುಡಿದಿರುವ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆಗಳು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.