.jpg)
Mangalore: ಭಾರಿ ಮಳೆ-ಆವರಣ ಗೋಡೆ ಕುಸಿದು ನಾಲ್ವರ ಸಾವು
Thursday, June 27, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆಗೆ ಉಳ್ಳಾಲ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಪಕ್ಕದ ಮನೆಯ ಗೋಡೆ, ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ ಪಟ್ಟಿದ್ದಾರೆ.
ಅಬೂಬಕ್ಕರ್ ಎಂಬವರಿಗೆ ಸೇರಿದ ಕಟ್ಟಡದ ಆವರಣ ಗೋಡೆಯು ಪಕ್ಕದ ಮನೆಯಲ್ಲಿ ವಾಸ್ತವ್ಯವಿದ್ದ ಯಾಸಿರ್ ಎಂಬುವರ ಮನೆಗೆ ಬುಧವಾರ ಮುಂಜಾನೆ ಕುಸಿದು ಬಿದ್ದು ಮನೆಯೊಳಗೆ
ಮಲಗಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40) ಮಕ್ಕಳಾದ ರಿಯಾನ (11) ಮತ್ತು ರಿಫಾನ (17) ಮೃತಪಟ್ಟಿದ್ದಾರೆ. ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೂವರ ಮೃತದೇಹಗಳನ್ನು ಅವಶೇಷಗಳಡಿಯಿಂದ ಸ್ಥಳೀಯರೇ ಹೊರತೆಗೆದರು, ಅಗ್ನಿಶಾಮಕ ಮತ್ತು ತುರದತು ಸೇವಾ ದಳದ ಸಿಬ್ಬಂದಿ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬಾಲಕಿಯ ಮೃತದೇಹವನ್ನು ಹೊರತೆಗೆದರು.
ಇಲ್ಲಿಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ., ಎಸಿಪಿ ಧನ್ಯ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.