
Mangalore: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು
Thursday, June 27, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ನಗರದ ರೊಸಾರಿಯೊ ಶಾಲೆಯ ಬಳಿ ಕಳೆದ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ನಡೆದಿದೆ.
ಮೃತ ರಿಕ್ಷಾ ಚಾಲಕರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ನಿವಾಸಿ ರಾಜು ಮತ್ತು ಪುತ್ತೂರಿನ ರಾಮಕುಂಜ ನಿವಾಸಿ ದೇವರಾಜು ಎಂದು ಗುರುತಿಸಲಾಗಿದೆ. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದ ರಾಜು ಅವರು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ದೇವರಾಜು ಅವರು ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಈ ವೇಳೆ ವಿದ್ಯುತ್ ಅಘಾತಕ್ಕೆ ಒಳಗಾಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.