Mangalore: ಕರಾವಳಿಯಲ್ಲಿ ಸಂಭ್ರಮ ಸಡಗರಿಂದ ಬಕ್ರೀದ್ ಆಚರಣೆ

Mangalore: ಕರಾವಳಿಯಲ್ಲಿ ಸಂಭ್ರಮ ಸಡಗರಿಂದ ಬಕ್ರೀದ್ ಆಚರಣೆ


ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇಂದು ಸಡಗರ, ಸಂಭ್ರಮದಿಂದ ‘ಈದುಲ್ ಅಝ್ಹಾ’ (ಬಕ್ರೀದ್) ಆಚರಿಸಲಾಗಿದೆ.

ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು.

ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್, ಪಂಪ್ವೆಲ್ನ ಮಸ್ಜಿದುತ್ತಖ್ವಾ, ಹಂಪನಕಟ್ಟೆಯ ಮಸ್ಜಿದುನ್ನೂರ್, ಸ್ಟೇಟ್ಬ್ಯಾಂಕ್ನ ಇಬ್ರಾಹೀಂ ಖಲೀಲ್ ಮಸ್ಜಿದ್, ಕಂಕನಾಡಿ ರಹ್ಮಾನಿಯಾ ಜುಮಾ ಮಸ್ಜಿದ್, ನಗರದ ವಾಸ್ಲೇನ್ ಇಹ್ಸಾನ್ ಮಸ್ಜಿದ್, ಪಾಂಡೇಶ್ವರ ಪೊಲೀಸ್ಲೇನ್ನ ಫೌಝಿಯಾ ಜುಮಾ ಮಸ್ಜಿದ್, ಬಂದರ್ ಕಚ್ಚೀ ಮೇಮನ್ ಜುಮಾ ಮಸ್ಜಿದ್, ಬಂದರ್ ಕಂದುಕ ಬದ್ರಿಯಾ ಜುಮಾ ಮಸ್ಜಿದ್, ಬೋಳಾರ ಮುಹಿಯುದ್ದೀನ್ ಜುಮಾ ಮಸ್ಜಿದ್, ಕುದ್ರೋಳಿ ಜಾಮೀಯಾ ಜುಮಾ ಮಸ್ಜಿದ್, ಬಿಕರ್ನಕಟ್ಟೆ ಅಹಸನುಲ್ ಮಸಾಜೀದ್ ಸಹಿತ ಜಿಲ್ಲೆಯ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್ ಹಾಗೂ ಖುತ್ಬಾ ನೆರವೇರಿಸಲಾಯಿತು.

ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ನಾನಾ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು.

ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್ಗಾಗಿ ಪ್ರಾರ್ಥಿಸಿದರು. ಬಳಿಕ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಸಲ್ಲಿಸಿದರು.

ಮಂಗಳೂರಿನ ಈದ್ಗಾ ಜುಮಾ ಮಸ್ಜಿದ್‌ನಲ್ಲಿ  ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್-ಅಝ್ಹರಿ ಅವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತ್ಬಾ ಪಾರಾಯಣ ನಡೆಯಿತು.

ಮಸ್ಜಿದ್ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅಧ್ಯಕ್ಷ ಅಲ್ಹಾಜ್ ಯೆನೆಪೊಯ ಅಬ್ದುಲ್ಲಾ ಕುಂಞಿ, ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಬಂದರ್, ಕೋಶಾಧಿಕಾರಿ ಹಾಜಿ ಎಸ್‌ಎಂ ರಶೀದ್, ಉಪಾಧ್ಯಕ್ಷ ಕೆ. ಅಶ್ರಫ್, ಈದ್ಗಾ ಮಸೀದಿಯ ಖತೀಬ್ ಪಿ.ಎಚ್ ಮುಸ್ತಫಾ ಅಝ್ಹರಿ ಮತ್ತಿತರರು ಪಾಲ್ಗೊಂಡಿದ್ದರು.

ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸ್ಜಿದ್ನ ಖತೀಬ್ ಅಬ್ದುಲ್ ಅಕ್ರಂ ಬಾಖವಿ ನಮಾಝ್ಗೆ ನೇತೃತ್ವ ನೀಡಿದರು. ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭಾಗವಹಿಸಿ ಶುಭ ಹಾರೈಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article