
Moodubidire: ನಾಳೆ ಪತ್ರಿಕಾ ದಿನಾಚರಣೆ ‘ಮಾಧ್ಯಮ ಹಬ್ಬ-2024’
ಮೂಡುಬಿದಿರೆ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದಿರೆ, ಮೂಡುಬಿದಿರೆ ಪ್ರೆಸ್‌ಕ್ಲಬ್ (ರಿ) ನೇತೃತ್ವದಲ್ಲಿ ನಾಳೆ (ಜು.1)ಅಪರಾಹ್ನ ಗಂಟೆ 3.30ಕ್ಕೆ ಮೂಡುಬಿದಿರೆ ಸಮಾಜಮಂದಿರದಲ್ಲಿ ಪತ್ರಿಕಾ ದಿನಾಚರಣೆ ‘ಮಾಧ್ಯಮ ಹಬ್ಬ-2024’ ಸಂಘದ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ, ಸಮಾಜ ಮಂದಿರ ಸಭಾ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಖ್ಯಾತ ಛಾಯಾಚಿತ್ರಗ್ರಾಹಕ ರವಿ ಕೋಟ್ಯಾನ್ ಮತ್ತು ಹಿರಿಯ ಕವಿ ಆರ್. ರಾಮಚಂದ್ರ ಪೈಯವರನ್ನು ಪ್ರೆಸ್ ಕ್ಲಬ್ ಗೌರವ ನೀಡಿ ಅಭಿನಂದಿಸಲಾಗುವುದು. ಎಸ್‌ಎಸ್‌ಎಲ್‌ಸಿ ಪ್ರತಿಭಾನ್ವಿತರಾದ ಸನ್ಮತ್ ಎಸ್. ಆಚಾರ್ಯ, ಯಜ್ಞೇಶ್ ಅಶ್ವಥಪುರ ಅವರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ.
ಬಂಟ್ವಾಳ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮರವರು ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಪ್ರಾಯೋಜಿತ ದತ್ತಿನಿಧಿ ಉಪನ್ಯಾಸ ನೀಡಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ತಿಳಿಸಿದ್ದಾರೆ.