
Moodubidire: ಮಿಜಾರು ಶಾಲೆಯಲ್ಲಿ ಬಾಲಕಾರ್ಮಿಕ ವಿರೋಧಿ ದಿನಾಚರಣೆ
Thursday, June 13, 2024
ಮೂಡುಬಿದಿರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಮಿಜಾರು ಪ್ರೌಢಶಾಲಾ ವಿಭಾಗ ಇಲ್ಲಿ ಇಂದು ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರನ್ನು ಎಚ್ಚರಿಸುತ್ತಾ ಜಾಥಾದಲ್ಲಿ ತೊಡಗಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಲೊಲಿಟ ಪಾಯಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ ಬಾಲಕಾರ್ಮಿಕತೆಯ ಬಗ್ಗೆ ಅರಿವು ಹಾಗೂ ಅದರಿಂದಾಗುವ ತೊಂದರೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಎಲ್ಲಾ ಸಹ ಶಿಕ್ಷಕರು ಹಾಗೂ ಶಾಲಾ ಎಸ್.ಡಿ.ಎಂ. ಸಿಯ ಅಧ್ಯಕ್ಷರು ಉಪಸ್ಥಿತರಿದ್ದರು.