
Moodubidire: ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ
Friday, June 14, 2024
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಮೂಡುಬಿದಿರೆ ಹಾಗೂ ಶ್ರೀ ಮಹಾವೀರ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನವನ್ನು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಜನಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷ ದಯಾನಂದ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಮಹಾವೀರ ಕಾಲೇಜಿನ ಪದವಿ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಇನ್ನಾ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ಭಾಗವಹಿಸಿದ್ದರು. ಶ್ರೀ ಮಹಾವೀರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಭಟ್, ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಮೂಡುಬಿದಿರೆ ವಲಯದ ಯೋಜನಾಧಿಕಾರಿ ಸುನೀತಾ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಮಮತಾ ಸ್ವಾಗತಿಸಿ, ಮೇಲ್ವೀಚಾರಕ ವಿಠ್ಠಲ ಕಾರ್ಯಕ್ರಮ ನಿರೂಪಿಸಿದರು.