
Moodubidire: ಎಕ್ಸಲೆಂಟ್ ಸಿಬಿಎಸ್‌ಇ ಸ್ಕೂಲ್‌ನಲ್ಲಿ ‘ಹಸಿರು ಡೇ’
Tuesday, June 11, 2024
ಮೂಡುಬಿದಿರೆ: ಇಲ್ಲಿನ ಕಲ್ಲೆಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಿಬಿಎಸ್‌ಇ ಸ್ಕೂಲ್‌ನಲ್ಲಿ ಸೋಮವಾರ ‘ಹಸಿರು ಡೇ’ಯನ್ನು ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಪುಟಾಣಿಗಳಿಗೆ ಗಿಡಗಳನ್ನು ವಿತರಿಸಿ ಮಾತನಾಡಿ, ಈ ಬಾರಿ ಎಕ್ಸಲೆಂಟ್ ಸಂಸ್ಥೆಯು 1,000 ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಯನ್ನು ಹಾಕಿಕೊಂಡಿದೆ. ಮಕ್ಕಳಿಗೆ ಗಿಡಗಳನ್ನು ನೀಡುವುದರಿಂದ ಅವರಲ್ಲಿ ಗಿಡಗಳನ್ನು ಪ್ರೀತಿಯಿಂದ ಸಾಕುವ ಮನೋಭಾವ ಬೆಳೆಯುತ್ತದೆ ಈ ನಿಟ್ಟಿನಲ್ಲಿ ಮಕ್ಕಳಿಗೆ ಗಿಡಗಳನ್ನು ನೀಡಿ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಂಗಲ್ಲು ಒಕ್ಕೂಟದ ಅಧ್ಯಕ್ಷೆ ಪ್ರೇಮಶ್ರೀ ಕಲ್ಲಬೆಟ್ಟು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎಕ್ಸಲೆಂಟ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಬಿ.ಪಿ. ಸಂಪತ್ ಕುಮಾರ್, ಶಾಲೆಯ ಪ್ರಾಂಶುಪಾಲ ಸುರೇಶ್, ಶೈಕ್ಷಣಿಕ ಸಂಯೋಜಕ ಶಿವಪ್ರಸಾದ್ ಉಪಸ್ಥಿತರಿದ್ದರು.