
Moodubidire: ದರೆಗುಡ್ಡೆಯಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಭೆ
Sunday, June 30, 2024
ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಗ್ರಾಮ ಸಮಿತಿ ಅಧ್ಯಕ್ಷ, ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಬೇಲೊಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಂದ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಣಯಿಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ, ಉಪಾಧ್ಯಕ್ಷರು ಪಂಚಾಯತ್‌ನ ಸದಸ್ಯರು, ಗ್ರಾಮ ಆಡಳಿತಾಧಿಕಾರಿ, ಗ್ರಾಮ ಮಟ್ಟದ ಬೀಟ್ ಪೊಲೀಸ್, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಂಜೀವಿನಿ ಒಕ್ಕೂಟದ ಎಂಬಿಕೆ, ಎಲ್‌ಸಿಆರ್‌ಪಿಗಳು ಉಪಸ್ಥಿತರಿದ್ದರು.