Moodubidire: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ

Moodubidire: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ


ಮೂಡುಬಿದಿರೆ: ಪ್ರಪಂಚದಾದ್ಯಂತ ಜನರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಆರೋಗ್ಯಕ್ಕೆ ಯೋಗವೇ ಭಾಗ್ಯ ಇಂದು ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗ ಎನ್ನುವುದು ಈ ವರ್ಷದ ಥೀಮ್ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ ಎಂದು ಮಸ್ಕತ್‌ನ ಓಮನ್‌ನಲ್ಲಿ ಯೋಗ ತರಬೇತುದಾರ ಜಗದೀಶ್ ಬಂಗೇರ ಹೇಳಿದರು.

ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎನ್‌ಸಿಸಿ, ಎನ್‌ಎಸ್‌ಎಸ್, ರೇಂಜರ್ ರೋವರ್, ರೆಡ್‌ಕ್ರಾಸ್ ಘಟಕಗಳ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. 

ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಅಧ್ಯಕ್ಷತೆವಹಿಸಿದರು. ಯೋಗದ ಅಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ದಿನಂಪ್ರತಿ ನಮ್ಮ ಜೀವನದಲ್ಲಿ ಅದು ಒಂದು ಭಾಗವಾಗಬೇಕು. ಯೋಗ ಧ್ಯಾನದಿಂದ ಬದುಕು ಸುಂದರವಾಗಿ ರೂಪಿತಗೊಳ್ಳುತ್ತದೆ. ಅಂತಹ ಯೋಗದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದರು.

ಮಸ್ಕತ್ ಓಮನ್ ಸಂಸ್ಕೃತಿ ಯೋಗ ತಂಡದ ಶ್ವೇತ ಪ್ರಭು, ವೀಣಾ ರೋಹಿತ್ ಕುಮಾರ್, ರವಿ ಪ್ರಕಾಶ್ ಭಟ್ ತರಬೇತುದಾರರಾಗಿ ಆಗಮಿಸಿದರು. 

ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಸೆಂಟ್ರಲ್ ಶಾಲೆಯ ಪ್ರಾಂಶುಪಾಲ ಸುರೇಶ್, ಎನ್‌ಸಿಸಿ ಅಧಿಕಾರಿ ಮಹೇಂದ್ರ ಕುಮಾರ್ ಜೈನ್, ಎನ್‌ಎಸ್‌ಎಸ್ ಅಧಿಕಾರಿ ತೇಜಸ್ವಿ ಭಟ್, ರೇಂಜರ್ಸ್ ರೋವರ್ಸ್ ಅಧಿಕಾರಿಗಳಾದ ಸಂಧ್ಯಾ ಹಾಗೂ ಪ್ರದೀಪ್ ಹಾಗೂ ರೆಡ್‌ಕ್ರಾಸ್ ಅಧಿಕಾರಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಎಕ್ಸಲೆಂಟ್ ಸೆಂಟ್ರಲ್ ಶಾಲೆಯ ಶೈಕ್ಷಣಿಕ ಸಂಯೋಜಕ ಪ್ರಸಾದ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಸುಧಾಶ್ರೀ ಕಾರ್ಯಕ್ರಮ ನಿರೂಪಿಸಿ, ದೈವಿಕ್ ಸ್ವಾಗತಿಸಿದರು. ಯಶಸ್ವಿನಿ ವಂದಿಸಿದರು. ವಿದ್ಯಾರ್ಥಿಗಳಿಂದ ಯೋಗದ ಕುರಿತಾದ ವೈವಿಧ್ಯಮಯ ನೃತ್ಯ ನಡೆಯಿತು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article