
Moodubidire: ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ-ಸಂಭ್ರಮಾಚರಣೆ
Tuesday, June 11, 2024
ಮೂಡುಬಿದಿರೆ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಬಿಜೆಪಿ ಮಂಡಲದ ವತಿಯಿಂದ ಬಸ್ ನಿಲ್ದಾಣದ ಆವರಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮವನ್ನು ಆಚರಿಸಿಸಲಾತಲಾಯಿತು.
ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಮುಖಂಡುಗಳಾದ ಲಕ್ಷ್ಮಣ್ ಪೂಜಾರಿ, ನಾಗರಾಜ ಪೂಜಾರಿ, ರಂಜಿತ್ ಪೂಜಾರಿ, ಗೋಪಾಲ ಶೆಟ್ಟಿಗಾರ್, ಪುರಸಭಾ ಸದಸ್ಯರು ಸಹಿತ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.