
Moodubidire: ಬಿಆರ್‌ಪಿ ಪ್ರೌಢಶಾಲೆಯಲ್ಲಿ ತಂಬಾಕು ವಿರೋಧಿ ದಿನ ಆಚರಣೆ
Friday, June 14, 2024
ಮೂಡುಬಿದಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಮೂಡುಬಿದಿರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ವಲಯ ಮತ್ತು ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮವು ಬಿಆರ್‌ಪಿ ಶಾಲೆಯಲ್ಲಿ ನಡೆಯಿತು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೈನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾತ್ ಬಳ್ನಾಡ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಜನಜಾಗೃತಿ ವೇದಿಕೆ ಅಧ್ಯಕ್ಷ ಶುಭಚಂದ್ರ, ಶ್ರೀ ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುನಿತಾ ನಾಯಕ್ ಉಪಸ್ಥಿತರಿದ್ದರು. ಮೂಡುಬಿದಿರೆ ವಲಯದ ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿನಗರ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಬಳ್ಳಾಲ್ ಸ್ವಾಗತಿಸಿ, ಬಾಬು ರಾಜೇಂದ್ರ ಪ್ರಸಾದ್ ಹೈಸ್ಕೂಲಿನ ಮುಖ್ಯ ಶಿಕ್ಷಕಿ ತೆರೇಸಾ ಕರ್ಡೋಜ ವಂದಿಸಿದರು.