Moodubidire: ಎಕ್ಸಲೆಂಟ್ ಕಾಲೇಜಿನಲ್ಲಿ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ

Moodubidire: ಎಕ್ಸಲೆಂಟ್ ಕಾಲೇಜಿನಲ್ಲಿ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ


ಮೂಡುಬಿದಿರೆ: ಆಧುನಿಕ ಸಮಾಜದ ಬಹುದೊಡ್ಡ ಸವಾಲು ಮಾದಕ ದ್ರವ್ಯ ಸೇವನೆಯಾಗಿದೆ. ತಾತ್ಕಾಲಿಕ ಮೋಜಿಗಾಗಿ ಆರಂಭವಾಗುವ ಮಾದಕ ವಸ್ತುಗಳ ಸೇವನೆಯಿಂದ ಅವರ ಭವಿಷ್ಯವನ್ನು ನಾಶಮಾಡುವ ಜೊತೆಗೆ ಸಮಾಜದ ನೆಮ್ಮದಿಯನ್ನು ಕೆಡಿಸುವವರು. ಮನುಷ್ಯನ ನರಮಂಡಲದ ಮೇಲೆ ಪರಿಣಾಮ ಬೀರುವ ಇಂತಹ ದುಶ್ಚಟಗಳಿಂದ ದೂರವಿದ್ದು ವೈಯಕ್ತಿಕ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ ಪಿ.ಜಿ ಹೇಳಿದರು.

ಅವರು ಅವರು ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಸೇವನೆಯ ಅಡ್ಡ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹದಿಹರೆಯದ ಸಮಸ್ಯೆಗಳಲ್ಲಿ ಮಾದಕ ವಸ್ತು ಸೇವನೆಯು ಪ್ರಮುಖವಾದುದು. ಅವುಗಳಿಂದ ಉಂಟಾಗುವ ಅನರ್ಥಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಸುರಕ್ಷಿತ ಮತ್ತು ಭವ್ಯ ರಾಷ್ಟ್ರ ನಿರ್ಮಾಣಕ್ಕೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಮಾಜ ಸ್ಪಂದಿಸಬೇಕಾಗಿದೆ ಎಂದರು.

ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ದಿವಾಕರ ರೈ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article