
Putturu: ರೆಫ್ರಿಜರೇಟರ್ ಸ್ಪೋಟ
Wednesday, June 19, 2024
ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.
ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ.
ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.