Subramanya: ರಾಜ್ಯದ ಕಾಂಗ್ರೆಸ್ ಸರಕಾರ ಜನಹಿತ ಮರೆತಿದೆ: ಬಿ.ಎಸ್. ಯಡಿಯೂರಪ್ಪ

Subramanya: ರಾಜ್ಯದ ಕಾಂಗ್ರೆಸ್ ಸರಕಾರ ಜನಹಿತ ಮರೆತಿದೆ: ಬಿ.ಎಸ್. ಯಡಿಯೂರಪ್ಪ


ಸುಬ್ರಹ್ಮಣ್ಯ: ರಾಜ್ಯದ ಕಾಂಗ್ರೆಸ್ ಸರಕಾರ ಜನಹಿತವನ್ನು ಸಂಪೂರ್ಣ ಮರೆತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಯಾವುದೋ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ಎಲ್ಲಾ ನೀರಾವರಿ ಯೋಜನೆಗಳು, ಎಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳು ನಿಂತು ಹೋಗಿದ್ದು, ಇದರ ಬಗ್ಗೆ ಅವರು ಮಾತನಾಡುತ್ತಿಲ್ಲ. ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ವಾಸ್ತವಿಕ ವಿಚಾರಗಳನ್ನು ಸರಕಾರದ ಗಮನಕ್ಕೆ ತಂದು ಇನ್ನಾದರೂ ರಾಜ್ಯದಲ್ಲಿ ಸರಕಾರ ಚೇತರಿಕೆಗೊಂಡು ರಾಜ್ಯದ ಅಭಿವೃದ್ಧಿ, ವಿಶೇಚವಾಗಿ ನೀರಾವರಿ ಕಡೆಗೆ ಒತ್ತು ನೀಡಲು ಒತ್ತಾಯಿಸಲಿದ್ದೇವೆ. ಆ ಒತ್ತಾಯಕ್ಕೂ ಸರಕಾರ ಮಣಿಯದೇ ಇದ್ದಲ್ಲಿ ಮುಂದಿನ ಹೋರಾಟದ ರೂಪವಾಗಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ವೈ.ವಿಜೇಂದ್ರ ಅವರು ಪ್ರತೀ ಜಿಲ್ಲೆಗೆ ತೆರಳಿ ಅಲ್ಲಿಯ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧಾರ ಮಾಡುತ್ತಿದ್ದಾರೆ. ಅದಾದ ಬಳಿಕ ತೀರ್ಮಾಣ ಕೈಗೊಳ್ಳುತ್ತೇವೆ ಎಂದರು.

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್:

ಜೆಡಿಎಸ್ ಹಾಗೂ ಬಿಜೆಪಿ ಮುಂಬರುವ ಗ್ರಾ.ಪಂ., ಜಿ.ಪಂ., ತಾ.ಪಂ. ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಹೊಂದಾಣಿಕೆ ಮಾಡಿಕೊಂಡು ಮುಂದುವರೆಯಲು ಯೋಜಿಸಿದ್ದೇವೆ. ಹೈಕಮಾಂಡ್ ಒಪ್ಪಿಗೆ ನೀಡುವ ವಿಶ್ವಾಸವಿದೆ. ಅಭಿವೃದ್ಧಿ ದೃಷ್ಟಿಯಿಂದ ಕುಮಾರಸ್ವಾಮಿಯವರೂ ನಮ್ಮ ಜೊತೆಗಿರಲಿದ್ದಾರೆ ಎಂದರು. ಎಂಎಲ್‌ಸಿ ಟಿಕೇಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದರು. ಉಪ ಚುನಾವಣೆಗೆ ಸಂಬಂಧಿಸಿದಂತೆ ವಾತವರಣ ಚೆನ್ನಾಗಿದೆ ಎಂದು ಪ್ರಶ್ನೆಗೆ ಬಿಎಸ್‌ವೈ ಉತ್ತರಿಸಿದರು.

ಕಾಂಗ್ರೆಸ್ ಸರಕಾರವನ್ನು ಬೀಳಿಸಲಿದ್ದೇವೆ ಎಂದು ಕೆಲವರ ಪ್ರತಿಕ್ರಿಯೆ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ ಎಂದು ಉತ್ತರಿಸಿದರು. ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ಟಾರ್ಗೆಟ್ ಮಾಡುತ್ತಿದ್ದೇಯಾ ಎಂಬ ಪ್ರಶ್ನೆಗೆ, ನೋಡೋಣ. ನಾನು ವಿರೋಧ ನಾಯಕರು, ಪಕ್ಷದ ಮುಖಂಡರ ಭಾವನೆಗಳನ್ನು ಪಡೆದು ಮಾಹಿತಿ ತಿಳಿಸುತ್ತೇನೆ ಎಂದರು. 

ಏಕಾಏಕಿ ಗ್ಯಾರಂಟಿ ಯೋಜನೆಗಳಿಗಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡನೀಯ. ರಾಜ್ಯದಲ್ಲಿನ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ವಾಪಸ್ಸು ಪಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇವೆ ಎಂದರು. ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವರ ದರ್ಶನ ಪಡೆಯಲು ಕ್ಷೇತ್ರಕ್ಕೆ ಆಗಮಿಸಿದ್ದೇನೆ. ತುಂಬ ದಿನಗಳಾಗಿತ್ತು ಇಲ್ಲಿಗೆ ಆಗಮಿಸದೇ ಅದಕ್ಕಾಗಿ ಬಂದಿದ್ದೇನೆ ಎಂದು ಬಿಎಸ್‌ವೈ ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article