Tenkanidiyur: ತೆಂಕನಿಡಿಯೂರು ಕಾಲೇಜಿಗೆ ರ‍್ಯಾಂಕ್
Sunday, June 9, 2024
ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ 2022-23ನೇ ಸಾಲಿನಲ್ಲಿ ನಡೆಸಿದ ಎಂ.ಎಸ್ಸಿ (ರಸಾಯನಶಾಸ್ತ್ರ) ಸ್ನಾತಕೋತ್ತರ ಪರೀಕ್ಷೆಯಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಯ್ಯದ್ ರೇಹಾ ಖಾದ್ರಿ 8.65 ಗಳಿಸಿ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ.
ಎಂ. ಪ್ರೀತಿ ಆಚಾರ್ಯ ಮತ್ತು ನಿಧಿ ಎನ್. ಪೈ ಎಂ.ಕಾಂ ಪರೀಕ್ಷೆಯಲ್ಲಿ ಕ್ರಮವಾಗಿ ದ್ವಿತೀಯ ಮತ್ತು ಐದನೇ ರ‍್ಯಾಂಕ್ ಗಳಿಸಿದ್ದಾರೆ.