
Udupi: ವ್ಯವಸ್ಥಿತ ಪರೀಕ್ಷೆ ನಡೆಸಲು ಸೂಚನೆ
Thursday, June 27, 2024
ಉಡುಪಿ: ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 30ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಇ.ಟಿ. ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಸೇರಿದಂತೆ ಇತರ ರಲ್ಲಾ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.