Udupi: ವಕೀಲರ ವಿರುದ್ಧ ದೂರು

Udupi: ವಕೀಲರ ವಿರುದ್ಧ ದೂರು

ಉಡುಪಿ: ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ, ವಕೀಲ ಅಖಿಲ್ ಬಿ. ಹೆಗ್ಡೆ ಮಕ್ಕಳ ವಿರುದ್ಧ ಪ್ರಕರಣಗಳನ್ನು ತೆಗೆದುಕೊಳ್ಳುತ್ತಿರುವ ಕುರಿತು ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.

ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಹೆಗ್ಡೆ, ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟ ಬಾಲಕಿಯ ಪ್ರಕರಣದಲ್ಲಿ ಆರೋಪಿ ಪರವಾಗಿ ವಕಾಲತ್ತು ಸಲ್ಲಿಸಿ, ನ್ಯಾಯಾಲಯದಲ್ಲಿ ಜಾಮೀನು ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಮೇಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬಾಲಕಿಯ ತಂದೆ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಸಂತ್ರಸ್ತ ಮಕ್ಕಳಿಗೆ ನ್ಯಾಯ ಒದಗಿಸುವ ಪ್ರಮುಖ ಸಂಸ್ಥೆಯಾಗಿದ್ದು, ಇಂಥ ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಆರೋಪಿ ಪರ ವಕಾಲತ್ತು ಸಲ್ಲಿಸಿ, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡು ಪ್ರಕರಣಕ್ಕೆ ಹಿನ್ನಡೆ ಉಂಟಾಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ಉಡುಪಿ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ಮೇಲೆ ನಿಯಮಾನುಸಾರ ಕಾನೂನು ರೀತಿಯ ಕ್ರಮ ಕೈಗೊಂಡು ಮೂರು ದಿನಗಳೊಳಗಾಗಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಆಯೋಗದ ಅಧ್ಯಕ್ಷರು ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article