
Udupi: ವಾರಿಜ ಅವರಿಗೆ ಡಾಕ್ಟರೇಟ್ ಪದವಿ
Tuesday, June 25, 2024
ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಧ್ಯಾಪಕಿ ವಾರಿಜ ಅವರು ಮಂಡಿಸಿದ 'ಜಾಬ್ ಅಟ್ಟಿಟ್ಯೂಡ್ ಅಮಾಂಗ್ ಔಟ್ಸೈರ್ಸ್ಡ್ ಎಂಪ್ಲಾಯಿಸ್ ಇನ್ ಗವರ್ನಮೆಂಟ್ ಡಿಪಾರ್ಟ್ಮೆಂಟ್ - ಆ ಸ್ಟಡಿ ವಿಥ್ ರಿಫೆರೆನ್ಸ್ ಟು ಉಡುಪಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ' ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಂಗಳೂರು ವಿ.ವಿ ಡಾಕ್ಟರೇಟ್ ಪದವಿಯನ್ನು ನೀಡಿದೆ.
ಇವರು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿದ್ದಾರೆ.