
Ujire: ಶಿಶಿಲ ಬಸದಿಯಲ್ಲಿ ಕಲ್ಯಾಣ ಮಂದಿರ ಆರಾಧನೆ
Tuesday, June 11, 2024
ಉಜಿರೆ: ಶಿಶಿಲ ಗ್ರಾಮದಲ್ಲಿರುವ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ಭಾನುವಾರ ಲೋಕಾಕಲ್ಯಾಣಕ್ಕಾಗಿ ಕಲ್ಯಾಣಮಂದಿರ ಆರಾಧನೆ ನಡೆಯಿತು.
ಪ್ರತಿಷ್ಠಾಚಾರ್ಯ ಜಯರಾಜ ಇಂದ್ರ ಹಾಗೂ ಸಹಪುರೋಹಿತರ ಸಹಕಾರದಲ್ಲಿ ಸಾಮೂಹಿಕ ಕಲ್ಯಾಣಮಂದಿರ ಆರಾಧನೆ, ಪದ್ಮಾವತಿ ಅಮ್ಮನವರ ವಿಶೇಷ ಪೂಜೆ ನಡೆಯಿತು.
ದಾನಿಗಳಾದ ವಿಜಯಕುಮಾರ್, ಕಣಿಯೂರು, ಸುರೇಂದ್ರ ಹೆಗ್ಡೆ ಮತ್ತು ಉಜಿರೆಯ ಶಶಿಪ್ರಭಾ ಅವರನ್ನು ಗೌರವಿಸಲಾಯಿತು.
ಬಸದಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸರ್ವಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜದ ಸದಸ್ಯರು ಸಕ್ರಿಯ ಸಹಕಾರ ನೀಡಿದರು.