Ujire: ರಾಜ್ಯ ಮಟ್ಟದ ನೆಟ್‌ಬಾಲ್ ಕ್ರೀಡಾಕೂಟದಲ್ಲಿ ಪ್ರಶಾಂತ್‌ಗೆ ಚಿನ್ನದ ಪದಕ
Wednesday, June 5, 2024
ಉಜಿರೆ: ಉಜಿರೆಯ ಎಸ್.ಡಿ.ಎಂ. ಪೊಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ 5ನೇ ಸೀನಿಯರ್ ರಾಜ್ಯ ಮಟ್ಟದ ನೆಟ್‌ಬಾಲ್ ಕ್ರೀಡೆಯಲ್ಲಿ ಬಾಗವಹಿಸಿ ಚಿನ್ನದ ಪದಕ ಗೆಲ್ಲುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ, ಕರ್ನಾಟಕ ರಾಜ್ಯ ಸರಕಾರದ ಅತ್ಯುನ್ನತ ಕ್ರೀಡಾ ಗೌರವವಾದ ಏಕಲವ್ಯ ಪ್ರಶಸ್ತಿ ಪುರಸ್ಕೃತ ನಿತಿನ್ ಅವರು ತರಬೇತಿ ನೀಡಿರುತ್ತಾರೆ.
ಅವರಿಗೆ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮ್ಯಾನೇಜರ್ ಚಂದ್ರನಾಥ ಜೈನ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮಿಥುನ್, ಕ್ರೀಡಾ ವಿಭಾಗದ ಸಂಪತ್ ಹಾಗೂ ಕಾಲೇಜಿನ ಸಿಬ್ಬಂದಿವರ್ಗ ಅಭಿನಂದಿಸಿ ಗೌರವಿಸಿದರು.