Ujire: ಸಾಹಿತಿ ಕಮಲಾ ಹಂಪನಾ ಅವರ ನಿಧನಕ್ಕೆ ಹೆಗ್ಗಡೆ ಸಂತಾಪ

Ujire: ಸಾಹಿತಿ ಕಮಲಾ ಹಂಪನಾ ಅವರ ನಿಧನಕ್ಕೆ ಹೆಗ್ಗಡೆ ಸಂತಾಪ

ಉಜಿರೆ: ಖ್ಯಾತ ಸಾಹಿತಿ, ಸಂಶೋಧಕಿ, ಉತ್ತಮ ವಾಗ್ಮಿ, ಆದರ್ಶ ಉಪನ್ಯಾಸಕಿ ಕಮಲಾ ಹಂಪನಾ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಸದಾ ಅಧ್ಯಯನಶೀಲರಾಗಿ, ಸಾಕಷ್ಟು ಲೇಖನಗಳನ್ನೂ, ಪುಸ್ತಕಗಳನ್ನೂ ಅವರು ಬರೆದಿದ್ದಾರೆ. ಅನೇಕ ಗ್ರಂಥಗಳ ಸಂಪಾದನೆ ಮಾಡಿದ್ದಾರೆ. ಜೈನ ಧರ್ಮದ ಬಗ್ಗೆ ಅವರು ಸಂಶೋಧನೆ ನಡೆಸಿ, ಅನೇಕ ಉಪಯುಕ್ತ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ನಾವು ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸುವ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿದ್ದಾರೆ. ಉತ್ತಮ ವಾಗ್ಮಿಯಾದ ಅವರು ಅನೇಕ ಸಮಾರಂಭಗಳಲ್ಲಿ ಉಪನ್ಯಾಸವನ್ನೂ ನೀಡಿದ್ದಾರೆ. ಇಂತಹ ಶ್ರೇಷ್ಠ ಸಾಹಿತಿಯನ್ನು ಕಳೆದುಕೊಂಡು ಕನ್ನಡ ನುಡಿ, ಭಾಷೆ ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article