Ullal: ಸಮುದ್ರಪಾಲಾಗುತ್ತಿದ್ದ ಓರ್ವ ಮಹಿಳೆ ಮೃತ್ಯು, ಐವರ ರಕ್ಷಣೆ

Ullal: ಸಮುದ್ರಪಾಲಾಗುತ್ತಿದ್ದ ಓರ್ವ ಮಹಿಳೆ ಮೃತ್ಯು, ಐವರ ರಕ್ಷಣೆ

ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮೊಗವೀರ ಪಟ್ನ ಬಳಿ ಸೋಮವಾರ ಸಂಜೆ ನಡೆದಿದೆ.

ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಸಾವನ್ನಪ್ಪಿದವರು.

ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದ ಪರಿಣಾಮನ ಈ ಮಹಿಳೆಯರು ಸಮುದ್ರ ಪಾಲಾಗಿದ್ದರು.  ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನಿಂದ ಆರು ಮಂದಿ ಮಹಿಳೆಯರ ತಂಡ ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ತಂಡ ಇನೋವಾ ಕಾರಿನ ಮೂಲಕ ಜೂ.7 ಕ್ಕೆ ಕೊಡಗಿಗೆ ತಲುಪಿತ್ತು. ಜೂ.9 ಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ನಡೆಸಿ, ನಿನ್ನೆಯಷ್ಟೇ ಧರ್ಮಸ್ಥಳ ಸಂದರ್ಶನ ನಡೆಸಿ ಸೋಮೇಶ್ವರ ದೇವಸ್ಥಾನ ಕ್ಕೆ ತೆರಳಿದ ಬಳಿಕ ಮೊಗವೀರ ಪಟ್ನ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article