Ullal: ಮಾದಕವಸ್ತು ಸೇವನೆ, ಆರೋಪಿ ಬಂಧನ
Sunday, June 9, 2024
ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ರಸ್ತೆಯ ಸಮ್ಮರ್ ಸ್ಯಾಂಡ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ವ್ಯಕ್ತಿ ಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಫ್ವಾನ್ (30) ಎಂದು ಗುರುತಿಸಲಾಗಿದೆ.
ಈತ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪಿಎಸ್‌ಐ ಸಂದೀಪಕುಮಾರ್ ಶೆಟ್ಟಿ ರವರು ಸಿಬ್ಬಂದಿ ಜೊತೆಯಲ್ಲಿ ಆರೋಪಿಯನ್ನು ಪತ್ತೆಮಾಡಿ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಯವರಲ್ಲಿ ತಪಾಸಣೆಗೆ ಒಳಪಡಿಸಿದಾಗ, ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.