
Beltangadi: ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು: ಬಂಧನ
ಬೆಳ್ತಂಗಡಿ: ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ಕಳೆದ ಎರಡು ವರ್ಷಗಳಲ್ಲಿ ಮನೆ ಕಳ್ಳತನ ನಡೆದ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂದು ಗುರುತಿಸಲಾಗಿದೆ.
ಬಂಧಿತ ಅರೋಪಿಯಿಂದ ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿರುತ್ತದೆ.
ಪ್ರಕರಣದ ವಿವರ:
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು 30,000 ರೂ. ನಗದು ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಎರಡು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಚರಣೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕ ಸಿ.ಬಿ. ರಿಷ್ಯಂತ್ ಅವರ ನಿರ್ದೇಶನದಂತೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ. ಮತ್ತು ರಾಜೇಂದ್ರ ಅವರುಗಳ ಮಾರ್ಗದರ್ಶನದಲ್ಲಿ, ಪುತ್ತೂರು ವಿಭಾಗದ ಪ್ರಭಾರ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಮತ್ತು ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಕೆ. ಅವರ ನೇತೃತ್ವದಲ್ಲಿ, ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್ ಬಿ.ಪಿ. ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ.ಬಿ. ಅವರು ಭಾಗವಹಿಸಿದ್ದರು.