Beltangadi: ವಿದ್ಯಾರ್ಥಿನಿ ಆತ್ಮಹತ್ಯೆ

Beltangadi: ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುದುವೆಟ್ಟಿನಲ್ಲಿ ಬುಧವಾರ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದಳು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಈಕೆ ಪ್ರಸ್ತುತ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು, ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article