Kasaragod: ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಹಳದಿ ರೋಗ

Kasaragod: ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಹಳದಿ ರೋಗ

ಕಾಸರಗೋಡು: ಜಿಲ್ಲೆಯಲ್ಲಿ ಹಳದಿ ಕಾಮಾಲೆ ಹಾಗೂ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ಎರಡಕ್ಕೇರಿದೆ. ಕೆಲ ದಿನಗಳ ಹಿಂದೆ ಹೊಸದುರ್ಗ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ವಿಭಾಗದ ಅಧ್ಯಾಪಕ ಕೆ.ಎಂ ಹೇಮಚಂದ್ರ ಹಳದಿ ಕಾಮಾಲೆಯಿಂದ ಸಾವಿಗೀಡಾಗಿದ್ದರು. ಇದೀಗ ಕಣ್ಣೂರು ಮಹಿಳಾ ಬಂಧಿಖಾನೆಯ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಇ.ಕೆ. ಪ್ರಿಯಾ(51) ಜ್ವರದಿಂದ ಸಾವಿಗೀಡಾದ ಘಟನೆ ಕಣ್ಣೂರಿನಲ್ಲಿ ನಡೆದಿದೆ. 

ಕೆಲ ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಪ್ರಿಯಾ ಚಿಕಿತ್ಸೆ ಪಡೆದು ಜ್ವರ ನಿಯಂತ್ರಣಕ್ಕೆ ಬಂದ ನಂತರ ಕೆಲಸಕ್ಕೆ ಹಾಜರಾಗಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕುಸಿದು ಬಿದ್ದ ಪ್ರಿಯಾರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಪರಿಯಾರಂ ವೈದ್ಯಕೀಯ ಆಸ್ಪತ್ರೆ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಿಯಾ ಕೊನೆಯುಸಿರೆಳೆದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article