
Kundapura: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕ್ಕರೆ ಲಾರಿ ಪಲ್ಟಿ
Saturday, July 6, 2024
ಕುಂದಾಪುರ: ನಗರದ ಹೊರವಲಯದ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಶುಕ್ರವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಲಾರಿಯು ಸೋಲಾಪುರದಲ್ಲಿ ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿತ್ತು. ಮುಳ್ಳಿಕಟ್ಟೆ ಜಂಕ್ಷನ್ ನಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡ ಲಾರಿಯು ಇನ್ನೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಚಾಲಕ ಅಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಸಂಚಾರವು ಕೆಲಹೊತ್ತು ಅಸ್ತವ್ಯಸ್ತಗೊಂಡಿತ್ತು. ಗಂಗೊಳ್ಳಿ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.